ಮಹಿಳೆಗೆ ಕಾರು ಡಿಕ್ಕಿ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಹೊನ್ನಾವರ : ತಾಲೂಕಿನ ಬಾಳೆಗದ್ದೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಸೋಮವಾರ ಸ್ಪಿಫ್ಟ್ ಕಾರು ಬೈಕಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಗಾಯಗೊಂಡಿದ್ದಾರೆ.

ಮಂಕಿ ಚಿತ್ತಾರದ ಶ್ವೇತಾ ಉದಯ ನಾಯ್ಕ ಗಂಭೀರ ಗಾಯಗೊಂಡವರು. ಗೇರುಸೊಪ್ಪಾದಿಂದ ಹೊನ್ನಾವರದ ಕಡೆಗೆ ಬೈಕಿನಲ್ಲಿ ಬರುತ್ತಿರುವಾಗ ಅಪಘಾತ ಸಂಭವಿಸಿದೆ. ಶ್ವೇತಾ ಬಲಗಾಲಿಗೆ ಗಂಭೀರ ಗಾಯವಾಗಿದೆ. ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದಾನೆ. ಈ ಬಗ್ಗೆ ಚಿಕ್ಕನಕೊಡದ ರಾಘವೇಂದ್ರ ಮಾದೇವ ನಾಯ್ಕ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

LEAVE A REPLY