ಕಾರಿಗೆ ಆಕಸ್ಮಿಕ ಬೆಂಕಿ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ನಿಲ್ಲಿಸಿದ್ದ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹಿಡಿದು ಸಂಪೂರ್ಣ ಸುಟ್ಟುಹೋದ ಘಟನೆ ಗುರುವಾರ ಬೆಳಿಗ್ಗೆ ಬಾವುಟಗುಡ್ಡೆ ಬಳಿ ನಡೆದಿದೆ

ಇಲ್ಲಿನ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಆಲ್ಟೋ ಕಾರು ಬೆಂಕಿಗೆ ಸಂಪೂರ್ಣ ಆಹುತಿಯಾಗಿದೆ. ಕಾರು ನಿಲ್ಲಿಸಿದ್ದ ಸಮೀಪ ರಾಶಿ ಹಾಕಲಾಗಿದ್ದ ಕಸದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಕಾರಿಗೆ ಆವರಿಸಿದೆ. ಇದರಿಂದ ಕಾರು ಭಾಗಶಃ ಹಾನಿಗೀಡಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

LEAVE A REPLY