ಮನೆಗೆ ನುಗ್ಗಿ ನಗದು ಕಳ್ಳತನ

ಬಂಟ್ವಾಳ : ಕಳ್ಳರು ಮನೆಯೊಳಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಎಲಿಯನಡುಗೋಡು ಗ್ರಾಮದ ಹೊಕ್ಕಾಡಿಗೋಳಿ ಎಂಬಲ್ಲಿ ಸೋಮವಾರ ಬೆಳಕಿಗೆ ಬಂದಿದೆ.

ಇಲ್ಲಿನ ನಿವಾಸಿ ಶಹನಾಝ್ ಎಂಬವರ ಮನೆಯಲ್ಲಿ ಈ ಕಳ್ಳತನ ಕೃತ್ಯ ನಡೆದಿದೆ. ಮನೆ ಮಂದಿ ಡಿ 3ರಂದು ಕಾವಳಕಟ್ಟೆ ಸಮೀಪದ ನೆಂಟರ ಮನೆಗೆ ತೆರಳಿದ್ದವರು ಸೋಮವಾರ ಬೆಳಿಗ್ಗೆ ಮನೆಗೆ ಮರಳಿದ ಬಳಿಕವಷ್ಟೆ ಈ ಕಳ್ಳತನ ಕೃತ್ಯ ಬೆಳಕಿಗೆ ಬಂದಿದೆ.             ಮನೆಯೊಳಗೆ ನುಗ್ಗಿದ ಕಳ್ಳರು ಕಪಾಟಿನೊಳಗಿದ್ದ ಚಿನ್ನಾಭರಣಗಳು ಹಾಗೂ ನಗದು ಸೇರಿ ಒಟ್ಟು 1.30 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಎಗರಿಸಿದ್ದಾರೆ. ಪೂಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.