ಕಂಟೈನರ್ ಪಲ್ಟಿ : ಬೆಳಕಿಗೆ ಬಂದ ಜಾನುವಾರು ಸಾಗಾಟ ಪ್ರಕರಣ

  ನಮ್ಮ ಪ್ರತಿನಿಧಿ ವರದಿ

ಬಂಟ್ವಾಳ : ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಸೋಮವಾರ ಬೆಳಿಗ್ಗೆ ಕಂಟೈನರ್ ಲಾರಿ ಪಲ್ಟಿಯಾಗಿದ್ದು, ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಕಂಟೈನರ್ ವಗ್ಗ ಬಳಿ ಅಪಘಾತಕ್ಕೀಡಾಗಿ ರಸ್ತೆಗೆ ಉರುಳಿ ಬಿದ್ದಿದೆ. ಉರುಳಿ ಬಿದ್ದ ಕಂಟೈನರನ್ನು ಪೊಲೀಸರು ಪರಿಶೀಲನೆ ನಡೆಸುವ ವೇಳೆ ಈ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬಹಿರಂಗವಾಗಿದೆ. ಅದರಲ್ಲಿ 9 ಎತ್ತು ಹಾಗೂ 5 ಎಮ್ಮೆ ಸಾಗಿಸಲಾಗುತ್ತಿತ್ತು. ಈ ಪೈಕಿ 1 ಎತ್ತು ಸಾವನ್ನಪ್ಪಿವೆ. ಜೀವಂತ ಜಾನುವಾರುಗಳನ್ನು ಗ್ರಾಮಾಂತರ ಠಾಣಾ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. “ಅಪಘಾತಕ್ಕೀಡಾದ ಕಂಟೈನರ್ ಚಾಲಕನ ಸಹಿತ ಆರೋಪಿಗಳು ಪರಾರಿಯಾಗಿದ್ದು, ಪತ್ತೆಗೆ ವಿಶೇಷ ಪೊಲೀಸ್ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ” ಎಂದು ಜಿಲ್ಲಾ ಎಸ್ಪಿ ರವಿಕಾಂತೇ ಗೌಡ ಮಾಧ್ಯಮಕ್ಕೆ ತಿಳಿಸಿದ್ದಾರೆ.

 

 

 

LEAVE A REPLY