ಉಳ್ಳಾಲ : ಮಾಂಗಲ್ಯ ಸರ ಸೆಳೆದು ಪರಾರಿ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲ ಎಂಬಲ್ಲಿ ಬೈಕಿನಲ್ಲಿ ಬಂದ ಅಪರಿಚಿತ ಯುವಕರಿಬ್ಬರು ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಪಿಲಾರು ನಿವಾಸಿ ದೇವಕಿ ಎಂಬವರು ಚಿನ್ನದ ಸರವನ್ನು ಕಳೆದುಕೊಂಡವರು. ಮದುವೆಗೆಂದು ಮನೆಯಿಂದ ಹೊರಟಿದ್ದ ಅವರು ಕಾಲ್ನಡಿಗೆಯಲ್ಲಿ ಸಾಗುತ್ತಿದ್ದಾಗ ವಿಳಾಸ ಕೇಳುವ ನೆಪದಲ್ಲಿ ಇವರ ಸಮೀಪ ಬಂದ ಬೈಕ್ ಸವಾರರು ದೇವಕಿ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದು ಪರಾರಿಯಾಗಿದ್ದಾರೆ ಎಂದು ಪೊಲೀಸರು ದೂರಿನಲ್ಲಿ ತಿಳಿಸಿದ್ದಾರೆ.