ಚೆಕ್ಪೋಸ್ಟ್ ಕಾವಲುಗಾರ ನೇಣಿಗೆ

ನಮ್ಮ ಪ್ರತಿನಿಧಿ ವರದಿ

ಕುಮಟಾ : ತಾಲೂಕಿನ ಸಾಂತಗಲ್ ಚೆಕ್ಪೋಸ್ಟ್ ಕಾವಲುಗಾರ ಗುರುವಾರ ಉಳ್ಳೂರುಮಠದ ಸಮೀಪದ ಅಬ್ಬಳ್ಳಿ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಲೂಕಿನ ಸಂತೆಗುಳಿ ಗ್ರಾಮ ಪಂಚಾಯತ ವ್ಯಪ್ತಿಯ ಅಬ್ಬಳ್ಳಿ ನಿವಾಸಿ ಕಮಲಾಕರ ಕೃಷ್ಣ ನಾಯ್ಕ ಆತ್ಮಹತ್ಯೆ ಮಾಡಿಕೊಂಡ ಕಾವಲುಗಾರ. ಇವರು ಮನೆಯ ಸಮೀಪದ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಮಲಾಕರ ಕೃಷ್ಣ ನಾಯ್ಕ ಅವರು ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ. ಈ ಕುರಿತು ಕುಮಟಾ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.