ಮನೆಕೆಲಸ ಮಾಡಿಸುತ್ತಿದ್ದ ಬಾಲಕಿ ರಕ್ಷಿಸಿದ ಚೈಲ್ಡ್ಲೈನ್

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಅಪ್ರಾಪ್ತ ಬಾಲಕಿಯನ್ನು ಮನೆಯಲ್ಲಿಟ್ಟುಕೊಂಡು ಬಲವಂತವಾಗಿ ಕೆಲಸ ಮಾಡಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಚೈಲ್ಡ್‍ಲೈನ್ ಮತ್ತು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿ ಬಾಲಕಿಯನ್ನು ರಕ್ಷಿಸಿದ್ದಾರೆ.

16ರ ಹರೆಯದ ಬಾಲಕಿ ಮೂಲತಃ ಭದ್ರಾವತಿಯವಳು. ಈಕೆಯನ್ನು ಮನೆಯಲ್ಲಿ  ಇಟ್ಟುಕೊಂಡು ದೈಹಿಕ ಹಿಂಸೆ ನೀಡಲಾಗುತ್ತಿತ್ತು. ಇದೀಗ ಮನೆ ಮಾಲಕನ ಮೇಲೆ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ರಕ್ಷಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಬಾಲಕಿ ಇದೀಗ ಮಕ್ಕಳ ರಕ್ಷಣಾ ಘಟಕದ ವಶದಲ್ಲಿದ್ದು, ಹೆತ್ತವರು ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.