ನಗರ ಪೊಲೀಸರಿಗೆ ಹೈ ನೋಟಿಸ್

ವಿನಾಯಕ ಬಾಳಿಗಾ ಕೊಲೆ ಪ್ರಕರಣ

ಮಂಗಳೂರು : ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈಗೆ ಮಂಪರು ಪರೀಕ್ಷೆ ನಡೆಸುವಂತೆ ಆದೇಶಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ ಮಂಗಳೂರು ಪೊಲೀಸರಿಗೆ ಕರ್ನಾಟಕ ಹೈಕೋರ್ಟ್ ಬುಧವಾರ ನೊಟೀಸ್ ಜಾರಿ ಮಾಡಿದೆ.

ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈಗೆ ಮಂಪರು ಪರೀಕ್ಷೆ ನಡೆಸುವ ಮನವಿಯನ್ನು ತಿರಸ್ಕರಿಸಿ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ಕೋರ್ಟ್ ನೀಡಿದ್ದ ಆದೇಶದ ವಿರುದ್ಧ ವಿನಾಯಕ ಬಾಳಿಗಾ ಅವರ ತಂದೆ ರಾಮಚಂದ್ರ ಬಾಳಿಗಾ ಅವರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಕೊಡಿಯಾಲಬೈಲಿನ ಅವರ ಮನೆ ಮುಂಭಾಗದಲ್ಲೇ ವಿನಾಯಕ ಬಾಳಿಗಾ ಅವರನ್ನು 2016ರ ಮಾ 21ರಂದು ಕೊಲೆಗೈಯ್ಯಲಾಗಿತ್ತು.