ರಾಷ್ಟ್ರಪತಿ ಉಡುಪಿ ಭೇಟಿ ವೇಳೆ ಶಿಷ್ಟಾಚಾರ ಉಲ್ಲಂಘಿಸಿದ ಸಿದ್ಧರಾಮಯ್ಯ: ಬಿಜೆಪಿ ಟೀಕೆ

ನಮ್ಮ ಪ್ರತಿನಿಧಿ ವರದಿ

ಉಡುಪಿ : ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಉಡುಪಿಗೆ ಆಗಮಿಸಿದ ಸಂದರ್ಭದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕ್ರಮವನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಟೀಕಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ ಅವರು ಸಂವಿಧಾನದ ಎಲ್ಲಾ ಚೌಕಟ್ಟುಗಳನ್ನೂ ಮೀರಿ ವರ್ತಿಸಿದ್ದಾರೆ. ತಮ್ಮ ವರ್ತನೆಯಿಂದ ಮತ್ತೊಮ್ಮೆ ಕೃಷ್ಣ ಮಠಕ್ಕೆ ಆಗಮಿಸದೇ ಅಗೌರವ ತೋರಿಸಿದ್ದಾರೆ. ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದು, ಅವರು ಕ್ಷಮೆಯಾಚನೆ ಮಾಡಬೇಕೆಂದು ಎಂದು ಮಟ್ಟಾರ್ ಆಗ್ರಹಿಸಿದರು.

ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಮಾಜಿ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ತಮ್ಮ ಚೇಲಾಗಳನ್ನು ಬಿಟ್ಟು ಅಡ್ಡಿ ಪಡಿಸುತ್ತಿರುವ ಕೀಳು ರಾಜಕೀಯವನ್ನು ಬಿಟ್ಟು ಬಿಡಲಿ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ 20 ಜಿಲ್ಲೆಗಳ ಪ್ರವಾಸ ಮುಗಿಸಿ ಜೂನ್ 23ಕ್ಕೆ ಉಡುಪಿ ಜಿಲ್ಲೆಗೆ ಆಗಮಿಸಲಿದ್ದಾರೆ. ಕಾರ್ಕಳದಲ್ಲಿ ದಲಿತ ಕಾಲನಿಗೆ ಭೇಟಿ ಕೊಟ್ಟು ಕುಂದುಕೊರತೆ ಆಲಿಸಿ ಉಡುಪಿಯಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ ಎಂದರು.