ತಂಗಿ ಮನೆಗೆ ಬಂದ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ತನ್ನ ತಂಗಿ ಮನೆಗೆ ತೆರಳಿದ್ದ ಮಹಿಳೆ ಅಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಆಕಾಶಭವನದಲ್ಲಿ ನಡೆದಿದೆ. ಆಕಾಶಭವನ ಮೇರಿ ಕ್ವಾಡ್ರಸ್(50) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೇರಿ ಕ್ವಾಡ್ರಸ್ ಅನಾರೋಗ್ಯದಿಂದ ಬಳಲುತ್ತಿದ್ದರು. ಎಲ್ಲಾ ವೈದ್ಯರ ಔಷಧಗಳನ್ನು ಮಾಡಿದರೂ ವಾಸಿಯಾಗಿರಲಿಲ್ಲ. ಕೆಲವು ಸಮಯಗಳ ಹಿಂದೆ ಇವರು ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಕಾವೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.