ದೇವೇಗೌಡರನ್ನು ಭೇಟಿಯಾದ ಕಾಂಗ್ರೆಸ್ ಅತೃಪ್ತ ವಿಶ್ವನಾಥ್

ಬೆಂಗಳೂರು : ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ಎಚ್ ವಿಶ್ವನಾಥ್ ಜೆಡಿಎಸ್ ವರಿಷ್ಠ ದೇವೇಗೌಡರನ್ನು ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿರುವುದು ಜೆಡಿಎಸ್, ಕಾಂಗ್ರೆಸ್ ವಲಯಗಳಲ್ಲಿ ಕೋಲಾಹಲ ಸೃಷ್ಟಿಸಿದೆ.  ಯಾವ ವಿಷಯದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನುವ ಮಾಹಿತಿ ಬಹಿರಂಗವಾಗಿಲ್ಲ. ವಿಶ್ವನಾಥ್ ಕಾಂಗ್ರೆಸ್ ಪಕ್ಷವನ್ನು ತೊರೆಯಲಿದ್ದಾರೆ ಎನ್ನುವ ವರದಿಗಳ ಮಧ್ಯೆ  ಇಂದು ವಿಶ್ವನಾಥ್, ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿ ಮಾಡಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ.