ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಕರಾವಳಿ ಅಲೆ  ವರದಿ

ಉಡುಪಿ : ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಸಿಲಿಂಡರ್ ಬೆಲೆಗಳ ಏರಿಕೆ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಘಟಕದ ಸದಸ್ಯರು ಶನಿವಾರ ಮಾರ್ಟಿರರ ಮೆಮೋರಿಯಲ್ಲಿನಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜನಾರ್ಧನ ತೋನ್ಸೆ ಮಾತನಾಡಿ, “ಪ್ರಧಾನಿ ನರೇಂದ್ರ ಮೋದಿ 2014ರ ಪಾರ್ಲಿಮೆಂಟ್ ಚುನಾವಣೆಯಲ್ಲಿ ಜನರಿಗೆ ಅಚ್ಚೆ ದಿನ್ ಅಥವಾ ಒಳ್ಳೆಯ ದಿನ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿದ್ದಾರೆ. ಆದರೆ ಇದೀಗ ಪೆಟ್ರೋಲ್, ಡೀಸೆಲ್, ಎಲ್ಪಿಜಿ  ಸಿಲಿಂಡರ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜೊತೆಗೆ ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚಾಗಿವೆ. ಇದು ಸಾಮಾನ್ಯ ಜನರ ದೈನಂದಿನ ಜೀವನದ ಮೇಲೆ ಭಾರೀ ಹೊಡೆತ ಬಿದ್ದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಖಂಡ ಅಮೃತ ಶೆಣೈ ಮಾತನಾಡಿ, “ಪ್ರಧಾನಿ ನರೇಂದ್ರ ಮೋದಿ ಕೋಟಿ ಕೋಟಿ ಉದ್ಯೋಗ ಸೃಷ್ಟಿಯ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿದ್ದಾರೆ. ಆದರೆ ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಹೇಳಿದ್ದಾರೆ. ಮೋದಿ ಹೇಳುವ ಪ್ರಕಾರ ಯುವಕರು ಪಕೋಡಗಳನ್ನು ಮಾಡಬೇಕು ಮತ್ತು ಅದನ್ನು ಮಾರಾಟ ಮಾಡಬೇಕು. ಇದು ಮೋದಿಗೆ ಉದ್ಯೋಗ ಮತ್ತು ವ್ಯವಹಾರದ ವ್ಯತ್ಯಾಸವೇ ಗೊತ್ತಿಲ್ಲ ಎಂಬುದನ್ನು ತೋರಿಸುತ್ತದೆ. ಮೋದಿ ಸರ್ಕಾರದಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ಹೆಚ್ಚಾಗಿರುವುದನ್ನು ಕಾಣಬಹುದು. ರಾಜಕೀಯ ಮತ್ತು ಚುನಾವಣಾ ಲಾಭಗಳಿಗಾಗಿ ಸರ್ಕಾರ ಕೋಮು ವಿವಾದಗಳಿಗೆ ಪ್ರೋತ್ಸಾಹ ನೀಡುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಉಡುಪಿ ಪುರಸಭೆ ಅಧ್ಯಕ್ಷೆ ಮೀನಾಕ್ಷಿ ಬನ್ನಂಜೆ, ಯತೀಶ್ ಕರ್ಕೇರ, ರಮೇಶ್ ಕಾಂಚನ್, ಸತೀಶ್ ಅಮೀನ್ ಪಡುಕೆರೆ, ಸುಲೋಚನಾ ದಾಮೋದರ್, ಜನಾರ್ಧನ ಭಂಡಾರ್ಕರ್ ಮತ್ತಿತರರಿದ್ದರು. ಪಕ್ಷದ ಕಾರ್ಯಕರ್ತರು ಬೋರ್ಡು ಶಾಲೆಯಿಂದ ಮಾರ್ಟಿರ್ಸ್ ಮೆಮೋರಿಯಲ್.ವರೆಗೆ ಮೆರವಣಿಗೆ ನಡೆಸಿದರು.

 

 

LEAVE A REPLY