ಹಿರಿತನಕ್ಕೆ ಬೆಲೆ ಕೊಡದ ಕಾಂಗ್ರೆಸ್

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ರಾಜ್ಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ. ಇವರು ಕಾಂಗ್ರೆಸ್ ಪಕ್ಷದಲ್ಲಿರುವ ಅತ್ಯಂತ ಹಿರಿಯ ಅನುಭವಿ ಹಾಗೂ ಸಭ್ಯ ರಾಜಕಾರಣಿ. ಇಂಥ ಮೇರು ವ್ಯಕ್ತಿತ್ವದ ನಾಯಕನನ್ನು ಕಾಂಗ್ರೆಸ್ ಪಕ್ಷ ಇಂದು ಕಡೆಗಣಿಸಿ ಮೂಲೆಗುಂಪು ಮಾಡಿರುವುದು ಆ ಪಕ್ಷಕ್ಕೆ ಶೋಭೆ ತರುವ ವಿಚಾರವಲ್ಲ. ಮೂಲ ಕಾಂಗ್ರೆಸಿಗರನ್ನು ಬಿಟ್ಟು ಹೊರಗಿನಿಂದ ವಲಸೆ ಬಂದ ಸಿದ್ಧರಾಮಯ್ಯನವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ ಕಾಂಗ್ರೆಸ್ ಪಕ್ಷ ಮುಂದೊಂದು ದಿನ ಅದಕ್ಕಾಗಿ ತಕ್ಕ ಬೆಲೆಯನ್ನು ತೆರಬೇಕಾಗುತ್ತದೆ. ಕೃಷ್ಣರಂತಹ ಹಿರಿಯ ರಾಜಕೀಯ ಮುತ್ಸದ್ಧಿಗಳ ಮಾತಿಗೆ ಬೆಲೆ ಕೊಡದೆ `ಆನೆ ನಡೆದದ್ದೇ ದಾರಿ’ ಎಂಬಂತೆ ವರ್ತಿಸುತ್ತಿರುವ ಸಿದ್ಧರಾಮಯ್ಯನವರು ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವುದರಲ್ಲಿ ಯಾವುದೇ ಸಂಶಯ ಇಲ್ಲ. ಹಿರಿತನಕ್ಕೆ ಬೆಲೆ ಕೊಡದ ಕಾಂಗ್ರೆಸ್ ಪಕ್ಷಕ್ಕೆ ಮುಂದೆ ಖಂಡಿತಾ ಭವಿಷ್ಯವಿಲ್ಲ

  • ಎನ್ ರಾಜೇಶ್ ಅಡಿಗ  ಮಂಗಳೂರು