ಪೊಲೀಸ್ ಹೃದಯಾಘಾತಕ್ಕೆ ಬಲಿ

ಮೃತ ಅಶೋಕ್ ಖಾರ್ವಿ

ನಮ್ಮ ಪ್ರತಿನಿಧಿ ವರದಿ

ಕುಂದಾಪುರ : ವಿವಿಧೆಡೆಗಳಲ್ಲಿ ಸೇವೆ ಸಲ್ಲಿಸಿ ಕೊಲ್ಲೂರು ಠಾಣೆಯಲ್ಲಿ ಹೆಡ್ ಕಾನಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಅಶÉೂೀಕ್ ಖಾರ್ವಿ ಎಂಬವರು ಪೊಲೀಸ್ ವಸತಿಗೃಹದಲ್ಲಿರುವಾಗ ಹೃದಯಾಘಾತಕ್ಕೆ ಬಲಿಯಾದರು. ಮೃತ ಅಶೋಕ್ ಖಾರ್ವಿ ಗಂಗೊಳ್ಳಿಯ ಖಾರ್ವಿಕೇರಿ ನಿವಾಸಿಯಾಗಿದ್ದು, ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ.

1996ರ ಬ್ಯಾಚಿನಲ್ಲಿ ಸೇವೆಗೆ ಸೇರಿದ್ದ ಅಶೋಕ್ ಖಾರ್ವಿ ಕೋಟದಲ್ಲಿ ಸೇವೆ ಸಲ್ಲಿಸಿದ ಬಳಿಕ ಜಿಲ್ಲಾ ಅಪರಾಧ ಪತ್ತೆದಳದಲ್ಲಿ ಕೆಲಸ ನಿರ್ವಹಿಸಿದ್ದರು. ಬಳಿಕ ಕೊಲ್ಲೂರು ಠಾಣೆಗೆ ವರ್ಗವಾಗಿದ್ದರು. ಆದರೆ ಕುಂದಾಪುರದ ಪೊಲೀಸ್ ವಸತಿಗೃಹದಲ್ಲಿ ವಾಸವಾಗಿದ್ದರು. ನಿನ್ನೆ ಸಂಜೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಇನ್ನೊಬ್ಬ ಸಿಬ್ಬಂದಿ ಚಂದ್ರ ಎಂಬವರ ಸಹಾಯ ಪಡೆದು ಅವರ ಬೈಕಿನಲ್ಲಿ ಕುಂದಾಪುರದ ಚಿನ್ಮಯೀ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಮೃತರಾಗಿದ್ದಾರೆ. ನಂತರ ಮಣಿಪಾಲದಲ್ಲಿ ಮರಣೋತ್ತರ ಶವ ಪರೀಕ್ಷೆ ನಡೆಸಿದ ಬಳಿಕ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಇಲಾಖೆಯ ಅಧಿಕಾರಿಗಳು ಗೌರವ ನಮನ ಸಲ್ಲಿಸಿದರು. ನಂತರ ಮೃತದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.