ವಿದ್ಯುತ್ ತಗುಲಿ ಹಸು ಸಾವು

ಸಾಂದರ್ಭಿಕ ಚಿತ್ರ

 ನಮ್ಮ ಪ್ರತಿನಿಧಿ ವರದಿ

ಯಲ್ಲಾಪುರ : ವಿದ್ಯುತ್ ಪ್ರವಹಿಸುತ್ತಿದ್ದ ಲೈನ್ ತುಂಡಾಗಿ ಗದ್ದೆಯಲ್ಲಿ ಮೇಯುತ್ತಿದ್ದ ಹಸು ತುಳಿದು ಮೃತಪಟ್ಟ ಘಟನೆ ಗುರುವಾರ ಪಟ್ಟಣದ ರಾಮಾಪುರದಲ್ಲಿ ಸಂಭವಿಸಿದೆ.

ಪಂಚಾಕ್ಷರಿ ಶಾಂತಯ್ಯ ಹಿರೇಮಠ ಅವರಿಗೆ ಸೇರಿದ ಹಸು ಇದಾಗಿದ್ದು, ಮೇಯುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೇ ತುಳಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಯಲ್ಲಾಪುರ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತಪಟ್ಟ ಹಸುವಿನ ಮೌಲ್ಯ 25,000 ರೂ ಎಂದು ಅಂದಾಜಿಸಲಾಗಿದೆ.

ಈ ಭಾಗದಲ್ಲಿ ಪದೇಪದೇ ಲೈನ್ ತುಂಡಾಗಿ ಬೀಳುವುದರ ಬಗ್ಗೆ ಹೆಸ್ಕಾಂನವರ ಗಮನಕ್ಕೆ ತಂದರೂ ಕ್ರಮ ಕೈಗೊಳ್ಳದೇ ಅನಾಹುತ ಸಂಭವಿಸಿರುವ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.