ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕುಸಿತ : ಜಿಲ್ಲಾಧಿಕಾರಿ ಕಳವಳ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಸಂಖ್ಯೆ ಅನುಪಾತದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕುಸಿತವಾಗುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಕೆ ಜಿ ಜಗದೀಶ್ ಕಳವಳ ವ್ಯಕ್ತಪಡಿಸಿದ್ದಾರೆ.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಆರೋಗ್ಯ ಅಭಿಯಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ಜನನ ಪ್ರಮಾಣ ಜಿಲ್ಲೆಯಲ್ಲಿ 1000 ಪುರುಷರ ಅನುಪಾತಕ್ಕೆ 948 ಹೆಣ್ಣುಮಕ್ಕಳಿದ್ದಾರೆ. ಈ ನಿಟ್ಟಿನಲ್ಲಿ ಪ್ರಸವಪೂರ್ವ ಲಿಂಗ ಪತ್ತೆ ವಿರುದ್ಧ ತೀವ್ರ ಕಾರ್ಯಾಚರಣೆ ನಡೆಸಬೇಕು. ಹಾಲಿ ಸ್ಕ್ಯಾನಿಂಗ್ ಕೇಂದ್ರಗಳು, ಆಸ್ಪತ್ರೆಗಳಲ್ಲಿರುವ ಸ್ಕ್ಯಾನಿಂಗ್ ಯಂತ್ರಗಳ ಕಾರ್ಯಚಟವಟಿಕೆಗಳ ಮೇಲೆ ತೀವ್ರ ನಿಗಾ ಇಡಬೇಕು. ಜಿಲ್ಲೆಯಲ್ಲಿ ಯಾವುದೇ ಹೊಸ ಸ್ಕ್ಯಾನಿಂಗ್ ಕೇಂದ್ರಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸದಂತೆ ಅವರು ಆರೋಗ್ಯ ಇಲಾಖೆಗೆ ಸೂಚಿಸಿದರು.