ಕೊಳೆತ ಶವ ಪತ್ತೆ

ಸಾಂದರ್ಭಿಕ ಚಿತ್ರ

ಉಪ್ಪಿನಂಗಡಿ : ಶಿರಾಡಿ ಗ್ರಾಮದ ಗುಂಡ್ಯ ಹೊಳೆಯಲ್ಲಿ ಅಪರಿಚಿತ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 30 ರಿಂದ 35 ವರ್ಷ ಪ್ರಾಯದ ವ್ಯಕ್ತಿಯದ್ದಾಗಿರಬಹುದೆಂದು ಅಂದಾಜಿಸಲಾಗಿರುವ ಈ ಶವ ಸಾವನ್ನಪ್ಪಿ ನಾಲ್ಕರಿಂದ ಐದು ದಿನಗಳಾಗಿರಬಹುದೆಂದು ಶಂಕಿಸಲಾಗಿದೆ. ಶವದಲ್ಲಿ ಕೆಂಪು ಬಣ್ಣದ ಪೂರ್ಣ ತೋಳಿನ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಕಪ್ಪು ಬಣ್ಣದ ಸ್ನಾನದ ಟೆವೆಲ್ ಮಾತ್ರ ಕಂಡು ಬಂದಿದೆ.