ಬಾವಿಯಲ್ಲಿ ಅಪರಿಚಿತ ಕೊಳೆತ ಶವ ಪತ್ತೆ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಕಾರ್ಕಳ : ನಲ್ಲೂರು ಗ್ರಾಮದ ಗಾಂಧೀನಗರ ಎಂಬಲ್ಲಿನ ಗೇರು ಬೀಜ ಕಾರ್ಖಾನೆಯ ಬಳಿಯ ತೋಟದ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.

ಒಂದು ವಾರದ ಹಿಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದ್ದು, ಶವ ಕೊಳೆತಿದ್ದು, ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.