ಬಾಬರಿ ಮಸೀದಿ ಪುನರ್ ನಿರ್ಮಾಣಕ್ಕೆ ಮತ್ತೆ ಆಗ್ರಹ

ಮಂಗಳೂರು : ಬಾಬರಿ ಮಸೀದಿ ಧ್ವಂಸ ಪ್ರಕರಣವು ಕೇವಲ ಮಸೀದಿ ಧ್ವಂಸ ಮಾತ್ರವಷ್ಟೇ ಅಲ್ಲ, ದೇಶದ ಪ್ರಜಾಪ್ರಭುತ್ವದ ಮತ್ತು ಜಾತ್ಯಾತೀತ ಮೌಲ್ಯಗಳ ನಾಶವೂ ಆಗಿದೆ. ಈ ಪ್ರಕರಣವು ದೇಶದ ಇತಿಹಾಸದಲ್ಲೇ ಕಪ್ಪು ಚುಕ್ಕೆಯಾಗಿದೆ ಎಂದು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಜಿಲ್ಲಾ ಸಮಿತಿ ಹೇಳಿದೆ.

ಪತ್ರಕರ್ತರೊಂದಿಗೆ ಮಾತನಾಡಿದ ಜಿಲ್ಲಾಧ್ಯಕ್ಷ ಮೌಲಾನಾ ಜಾಫರ್ ಸಾದಿಕ್ ಫೈಝಿ ಅವರು, “ಧ್ವಂಸಗೊಂಡಿರುವ ಬಾಬರಿ ಮಸೀದಿಯನ್ನು ಮತ್ತೆ ಅದೇ ಸ್ಥಳದಲ್ಲಿ ಪುನರ್ ನಿರ್ಮಿಸಬೇಕು. ಧ್ವಂಸಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅಲ್ಲದೆ ಲಿಬರ್ಹಾನ್ ಆಯೋಗದ ವರದಿಯನ್ನು ಜಾರಿಗೊಳಿಸಬೇಕು” ಎಂದರು.