ಲಾರಿ ಮುಖಾಮುಖಿ : ಚಾಲಕರು ಗಂಭೀರ

ಅಪಘಾತದಲ್ಲಿ ನುಜ್ಜುಗುಜ್ಜಾದ ಲಾರಿಗಳು

ನಮ್ಮ ಪ್ರತಿನಿಧಿ ವರದಿ

ಕುಂದಾಪುರ : ಪರಸ್ಪರ ವಿರುದ್ಧ ದಿಕ್ಕಿನಿಂದ ಬಂದ ಎರಡು ಸರಕು ತುಂಬಿದ ಲಾರಿಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಲಾರಿಗಳೆರಡೂ ಛಿದ್ರಗೊಂಡು ಚಾಲಕರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೆಮ್ಮಾಡಿಯ ಹಾಲು ಡೈರಿ ಸಮೀಪ ಗುರುವಾರ ಸಂಜೆ ನಡೆದಿದೆ.

ಮಂಗಳೂರಿನಿಂದ ಗೋವಾಕ್ಕೆ ಮರದ ರೀಪುಗಳನ್ನು ತುಂಬಿಸಿಕೊಂಡು ಸಾಗುತ್ತಿದ್ದ ಮಹರಾಷ್ಟ್ರ ನೋಂದಣಿಯ ಲಾರಿಗೆ ಹುಬ್ಬಳ್ಳಿ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಸರಕು ತುಂಬಿದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ನುಜ್ಜುಗುಜ್ಜಾಗಿದ್ದು, ಲಾರಿ ಮಗುಚಿ ಬಿದ್ದಿದೆ. ಎದುರುಗಡೆಯಿಂದ ಹೋಗುತ್ತಿದ್ದ ವಾಹನವೊಂದನ್ನು ಓವರ್ಟೇಕ್ ಮಾಡಿ ಮುಂದಕ್ಕೆ ನುಗ್ಗಿದಾಗ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆಯಲ್ಲಿ ಎರಡೂ ಲಾರಿಗಳ ಚಾಲಕರು ಗಂಭೀರ ಗಾಯಗೊಂಡಿದ್ದು, ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಿಂದಾಗಿ ಸುಮಾರು ಒಂದು ಗಂಟೆಗಳ ಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು.