8 ಕೇಜಿ ಅಕ್ರಮ ಗಾಂಜಾ ಪತ್ತೆ , ಆರೋಪಿ ಬಂಧನ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಬೃಹತ್ ಪ್ರಮಾಣದಲ್ಲಿ ಗಾಂಜಾವನ್ನು ಪೂರೈಕೆ ಮಾಡುತ್ತಿದ್ದ ಆರೋಪಿಯನ್ನು ಗಾಂಜಾ ಸಹಿತ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಇಬ್ರಾಹಿಂ (38)
ಇಬ್ರಾಹಿಂ (38)

ಆರೋಪಿಯನ್ನು  ಕೇರಳ ಕಾಸರಗೋಡು ಜಿಲ್ಲೆಯ ಕುಂಬಳೆ ನಿವಾಸಿ ಇಬ್ರಾಹಿಂ (38) ಎಂದು ಗುರುತಿಸಲಾಗಿದೆ. ಈತ ನ 27ರಂದು ಆಂಧ್ರ ಪ್ರದೇಶದ ವಿಶಾಖಪಟ್ಟಣದ ಬಳಿಯಿಂದ ಬೃಹತ್ ಪ್ರಮಾಣದಲ್ಲಿ ಮಂಗಳೂರು ನಗರಕ್ಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಗಾಂಜಾವನ್ನು ತರಿಸಿದ್ದಾನೆ ಎನ್ನುವ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು ಪಂಪ್‍ವೆಲ್ ವೃತ್ತದ ಬಳಿಯಿರುವ ಹೊಟೇಲ್ ಪದ್ಮಶ್ರೀ ಮುಂಭಾಗದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಇಲ್ಲಿ ಗಾಂಜಾವನ್ನು ಪುತ್ತೂರು ಮತ್ತು ಸುಳ್ಯ ಕಡೆಗೆ ಮಾರಾಟ ಮಾಡಲು ತೆರಳುವ ಸಂದರ್ಭದಲ್ಲಿ ಇಬ್ರಾಹಿಂನನ್ನು ವಶಕ್ಕೆ ಪಡೆದುಕೊಂಡು ಆತನ ಬಳಿ ಇದ್ದ ಒಟ್ಟು 8 ಕೇಜಿ ಗಾಂಜಾ, ಮೊಬೈಲ್ ಫೆÇೀನ್ ಹಾಗೂ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಇದರ ಅಂದಾಜು ಮೌಲ್ಯ 2,01,510 ರೂಪಾಯಿ ಎಂದು ಹೇಳಲಾಗಿದೆ.

ಆರೋಪಿಯು ವಿಶಾಖಪಟ್ಟಣದಿಂದ ಗಾಂಜಾವನ್ನು ಖರೀದಿ ಮಾಡಿ ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಮಾರಾಟ ಮಾಡಲು ತಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ಈತನು ಈ ಹಿಂದೆ 2014ರಲ್ಲೂ ಇದೇ ರೀತಿಯಲ್ಲಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಸಿಕ್ಕಿಬಿದ್ದು, ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡು ಓಡಾಡುತ್ತಿದ್ದು, ಬಂಧನಕ್ಕೆ ವಾರಂಟ್ ಹೊರಡಿಸಲಾಗಿತ್ತು. ಸಿಸಿಬಿ ಪೊಲೀಸರು ವಶಪಡಿಸಿಕೊಂಡ ಗಾಂಜಾ ಮತ್ತು ಆರೋಪಿಯನ್ನು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.