ಗಾಂಜಾ ಸಾಗಿಸುತ್ತಿದ್ದ ಯುವಕನ ಬಂಧನ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಶಿರಸಿ : ಇಲ್ಲಿನ ಗಾಂಧಿನಗರ ಭಾಗದಲ್ಲಿ ಬೈಕಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಯುವಕನನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ.

ಗಾಂಧಿನಗರದ ಪ್ರದೀಪ ಶೇಟ ಎಂಬಾತನನ್ನು ಪಿಎಸೈ ಮಾದೇಶ ಅವರು ಬಂಧಿಸಿ, ಆತನ ಬಳಿಯಿದ್ದ 3,500 ರೂ ಮೌಲ್ಯದ 263 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.