`ರೈತರಿಗೆ ಬಿತ್ತನೆ ಬೀಜ ವಿತರಣೆ ಸಮರ್ಪಕವಾಗಿ ನಡೆಯಬೇಕು’

ಮಂಗಳೂರು : ರಾಜ್ಯದ ರೈತರಿಗೆ ಬಿತ್ತನೆ ಬೀಜ ವಿತರಣೆಯ ಯೋಜನೆಯನ್ನು ಸಹಕಾರ ಸಂಘಗಳ ಮೂಲಕ ವಿತರಿಸಲು ಕರ್ನಾಟಕ ರಾಜ್ಯ ಸರಕಾರ ತೀರ್ಮಾನಿಸಿದೆ.  ಈ ಹಿನ್ನೆಲೆಯಲ್ಲಿ ಮಾಹಿತಿ ಕಾರ್ಯಾಗಾರ ಏಪ್ರಿಲ್  11ರಂದು ಎಸ್ ಸಿ ಡಿ ಸಿ ಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.  ಉಡುಪಿ, ದ ಕ ಜಿಲ್ಲೆಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು/ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದ ಈ ಕಾರ್ಯಾಗಾರವು ಎಸ್ ಸಿ ಡಿ ಸಿ ಸಿ ಬ್ಯಾಂಕ್, ಸಹಕಾರ ಇಲಾಖೆ ಹಾಗೂ ಕೃಷಿ ಇಲಾಖೆಗಳ ಜಂಟಿ ಆಶ್ರಯದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಎಂ ಎನ್ ರಾಜೇಂದ್ರ ಕುಮಾರ್ ಮಾತನಾಡಿ, “ರಾಜ್ಯ ಸರಕಾರದ ಈ ಯೋಜನೆ ರೈತರಿಗೆ ಬಹು ಉಪಯೋಗವಾಗಿದೆ.  ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಆರಂಭಗೊಳ್ಳುವ ಮೊದಲೇ ಬಿತ್ತನೆ ಬೀಜ ವಿತರಣೆಯ ಬಗ್ಗೆ ಚಿಂತನೆ ನಡೆಸಿರುವುದು ಆಶಾದಾಯಕ”ವೆಂದರು.