ಜ 13-19 ಏಳಿಂಜೆ ಶ್ರೀಲಕ್ಷ್ಮೀ ಜನಾರ್ಧನ ದೇವಳ ಬ್ರಹ್ಮಕಲಶ

ನಮ್ಮ ಪ್ರತಿನಿಧಿ ವರದಿ

ಮುಲ್ಕಿ : ಏಳಿಂಜೆ ಶ್ರೀಲಕ್ಷ್ಮೀ ಜನಾರ್ಧನ ಮಹಾಗಣಪತಿ ದೇವಸ್ಥಾನದಲ್ಲಿ ಜನವರಿ 13ರಿಂದ 19ರವರೆಗೆ ಅಷ್ಠ ಬಂಧ ಬ್ರಹ್ಮ ಕಲಶೋತ್ಸವವು ಶಿಬರೂರು ಬ್ರಹ್ಮಶ್ರೀ ವೇದವ್ಯಾಸ ತಂತ್ರಿ ನೇತೃತ್ವದಲ್ಲಿ ಜರುಗಲಿದೆ. ಜನವರಿ 13ರಂದು ಬೆಳಿಗ್ಗೆ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ನಡೆಯಲಿದ್ದು, ಮುಲ್ಕಿ ಸೀಮೆ ಅರಸರಾದ ದುಗ್ಗಣ ಸಾವಂತರು, ಶ್ರೀ ಕ್ಷೇತ್ರ ಕಟೀಲು ಅನುವಂಶಿಕ ಮೊಕ್ತೇಸರರಾದ ವಾಸುದೇವ ಆಸ್ರಣ್ಣ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ ನೂತನ ಪುಷ್ಕರಿಣಿ ಭಗವದರ್ಪಣೆ ನಡೆಯಲಿದೆ. ಜನವರಿ 17ರ ಬೆಳಿಗ್ಗೆ ಶ್ರೀ ಮಹಾಗಣಪತಿ ದೇವರಿಗೆ 500 ಪರಿಕಲಶ ಸಹಿತ ಬ್ರಹ್ಮ ಕಲಶಾಭಿಷೇÀಕ, 108 ನಾರಿಕೇಳ ಗಣಯಾಗ, ಮಧ್ಯಾಹ್ನ ಅನ್ನಸಂತರ್ಪಣೆ  ನಡೆಯಲಿದೆ ಎಂದು ದೇವಳ ಆಡಳಿತ ಮೊಕ್ತೇಸÀರ ಹಾಗೂ ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಏಳಿಂಜೆ ಕೊಂಜಾಲುಗುತ್ತು ಪ್ರಭಾಕರ ಶೆಟ್ಟಿ ತಿಳಿಸಿದ್ದಾರೆ.