ವಾಹನಗಳ ಹೊಗೆ ಪರೀಕ್ಷಣಾ ಸಂಚಾರಿ ವಾಹನಕ್ಕೆ ಚಾಲನೆ

ಹೊಗೆ ಪರೀಕ್ಷಣಾ ಸಂಚಾರಿ ವಾಹನವನ್ನು ರಮಾನಾಥ ರೈ ಲೋಕಾರ್ಪಣೆ ಮಾಡಿದರು

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು, ಮಹಾನಗರ ಪಾಲಿಕೆ, ಪ್ರಾದೇಶಿಕ ಸಾರಿಗೆ ಇಲಾಖೆ ಮತ್ತು ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ ಲಿಮಿಟೆಡ್ ಮಂಗಳೂರು ಇವುಗಳ ಜಂಟಿ ಸಹಭಾಗಿತ್ವದಲ್ಲಿ ವಾಹನಗಳ ಹೊಗೆ ಪರೀಕ್ಷಣಾ ಸಂಚಾರಿ ವಾಹನದ ಉದ್ಘಾಟನಾ ಸಮಾರಂಭ ಶುಕ್ರವಾರ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, “ಪರಿಸರ ಮಾಲಿನ್ಯವಾಗದಂತೆ ಜವಾಬ್ದಾರಿಯುತವಾಗಿ ದಿನನಿತ್ಯದ ಕೆಲಸವನ್ನು ನಿರ್ವಹಿಸುವ ಹೊಣೆಗಾರಿಕೆ ನಮ್ಮ ಮೇಲಿದೆ. ಪರಿಸರದ ಹಾನಿ ತಡೆಗಟ್ಟಲು ಜನರ ಸಹಕಾರ ಅತೀ ಅಗತ್ಯ” ಎಂದರು.

ವಿದ್ಯಾರ್ಥಿಗಳಿಂದ ಪರಿಸರ ಸ್ವಚ್ಛತೆ ಕುರಿತ ಜಾಗೃತಿ ಜಾಥಾವನ್ನು ಆಯೋಜಿಸಲಾಗಿತ್ತು.