ರೈತ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

 ನಮ್ಮ ಪ್ರತಿನಿಧಿ ವರದಿ

ಯಲ್ಲಾಪುರ : ತಾಲೂಕಿನ ಮಾವಿನಮನೆ ಗ್ರಾಮ ಪಂಚಾಯತ ವ್ಯಾಪ್ತಿಯ ಕುಪ್ಪಳ್ಳಿಯಲ್ಲಿ ಬುಧವಾರ ರೈತನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಪ್ಪಳ್ಳಿಯ ಶಿವರಾಮ ವಿಶ್ವೇಶ್ವರ ಭಟ್ಟ ಎಂಬಾತ ಆತ್ಮಹತ್ಯೆ ಮಾಡಿಕೊಂಡ ರೈತ. ಈತ ಕೃಷಿಗಾಗಿ ವಿವಿಧೆಡೆ ಸಾಲ ಮಾಡಿಕೊಂಡಿದ್ದು, ಅದನ್ನು ತೀರಿಸಲು ಸಾಧ್ಯವಾಗಿರಲಿಲ್ಲ. ಸಾಲಬಾಧೆ ತಾಳಲಾರದೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.