ದಲಿತ ನಿಧಿ ಬಳಕೆಗೆ ಒತ್ತಾಯಿಸಿ ಪ್ರತಿಭಟನೆ

ಬೆಳುವಾಯಿ ಪಂ ಕಚೇರಿ ಎದುರು ಪ್ರತಿಭಟನೆ ನಡೆಯಿತು

ನಮ್ಮ ಪ್ರತಿನಿಧಿ ವರದಿ

ಮೂಡುಬಿದಿರೆ : ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ಬೆಳುವಾಯಿ ಗ್ರಾಮ ಪಂಚಾಯತ್ ಕಚೇರಿ ಎದುರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು.

ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ ಮಾತನಾಡಿ, ದಲಿತ ಸಮುದಾಯಕ್ಕೆ ಕಾಯ್ದಿರಿಸಿದ ಶೇ 25 ಮೀಸಲು ಹಣವನ್ನು ಸಮರ್ಪಕವಾಗಿ ಖರ್ಚು ಮಾಡದಿರುವುದು ಉದ್ಯೋಗ ಖಾತರಿ ಯೋಜನೆ ಸಮರ್ಪಕ ಅನುಷ್ಠಾನವಾಗದಿರುವುದಕ್ಕೆ ಕಾರಣ ಕೇಳಿದರು. ಕಾಶಿಪಟ್ಣ ಗ್ರಾಮ ಪಂಚಾಯತಿನಲ್ಲಿ ಶೇ 80 ಕುಟುಂಬಗಳಿಗೆ ದಲಿತ ಮೀಸಲು ನಿಧಿ ಕೊಡಲು ಸಾಧ್ಯವಾಗಿತ್ತಾದರೆ ಬೆಳುವಾಯಿಯಲ್ಲಿ ಯಾಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದರು.

ಪಂಚಾಯತ್ ಅಧ್ಯಕ್ಷ ಭಾಸ್ಕರ ಆಚಾರ್ಯ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಬಂದು ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿದ ಬಳಿಕ ಪ್ರತಿಭಟನೆ ಕೈಬಿಡಲಾಯಿತು.