ನಳಿನ್ ವಿರುದ್ಧ ಎಫೈಆರ್

ಮಂಗಳೂರು : ವಿವಾದಾತ್ಮಕ ಹೇಳಿಕೆ ನೀಡಿರುವ ಸಂಸದ ನಳಿನ್ ಭಾಷಣದ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿದೆ. ನ್ಯಾಯಾಲಯದ ನಿರ್ದೇಶನವನ್ನು ಅನುಸರಿಸಿ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಚಂದ್ರಶೇಖರ್ ಹೇಳಿದ್ದಾರೆ.

ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಾರ್ತಿಕ್ ರಾಜ್ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಇನ್ನೂ ಬಂಧಿಸಿಲ್ಲ ಎನ್ನುವ ವಿಚಾರದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಸಂಸದ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ನಳಿನ್ ವಿರುದ್ಧ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಪ್ರಚೋದನಾಕಾರಿ ಭಾಷಣ ಮಾಡಿದ ಸಂಸದನ ವಿರುದ್ಧ ಕೋರ್ಟ್ ಸೂಚನೆ ಮೇರೆಗೆ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.ಕೊಣಾಜೆ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರು ದಾಖಲಿಸಲಾಗಿತ್ತು.