ಚಾಲಕನ ನಿಯಂತ್ರಣ ತಪ್ಪಿ ಮೀನು ವಾಹನ ಪಲ್ಟಿ

ನಮ್ಮ ಪ್ರತಿನಿಧಿ ವರದಿ

ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66 ಸುರತ್ಕಲ್ ಸೂರಜ್ ಹೋಟೆಲ್ ಮುಂಭಾಗದಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ಮೀನಿನ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮೀನು ಪೂರಾ ರಸ್ತೆಯಲ್ಲಿ ಬಿದ್ದಿದ್ದು, ಹೆದ್ದಾರಿ ಸಂಚಾರ ವ್ಯತ್ಯಯಗೊಂಡಿದೆ. ಕೂಡಲೇ ಸ್ಥಳೀಯರು ಹಾಗೂ ಸುರತ್ಕಲ್ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಹೆದ್ದಾರಿ ಸಂಚಾರ ಸುಗಮಗೊಳಿಸಿದ್ದಾರೆ. ಬಳಿಕ ಕ್ರೇನ್ ಬಳಸಿ ಪಿಕಪ್ಪನ್ನು ಮೇಲೆತ್ತಲಾಯಿತು.