ಬಸ್-ಕಾರು ಡಿಕ್ಕಿ : ಐವರು ಗಂಭೀರ

ನಮ್ಮ ಪ್ರತಿನಿಧಿ ವರದಿ
ಬೆಳ್ತಂಗಡಿ : ಇಲ್ಲಿಗೆ ಸಮೀಪದ ಕೊಕ್ಕಡದ ಪಾರ್ಪಿಕಲ್ ಬಳಿ ರಸ್ತೆ ಅಪಘಾತದಲ್ಲಿ ಐವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಮಹೇಂದ್ರ ಕ್ಸೈಲೋ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಐದು ಮಂದಿ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಮೂವರು, ಬಸ್ಸಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕ್ಸೈಲೋ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.