ಗ್ರೇಟ್ ಇಂಡಿಯನ್ ಬಸ್ಟರ್ಡ್ ಹಕ್ಕಿ ಸಂರಕ್ಷಿಸಲಿರುವ ಅರಣ್ಯ ಇಲಾಖೆ

ನಮ್ಮ ಪ್ರತಿನಿಧಿ ವರದಿ

ಮಂಗಳೂರು :  ಗ್ರೇಟ್ ಇಂಡಿಯನ್ ಬಸ್ಟರ್ಡ್ ಎಂಬ ಅಪರೂಪದ ಹಕ್ಕಿಯನ್ನು ಸಂರಕ್ಷಿಸುವ  ನಿಟ್ಟಿನಲ್ಲಿ ಕರ್ನಾಟಕ ಅರಣ್ಯ ಇಲಾಖೆ ಕ್ರಿಯಾ ಯೋಜನೆಯೊಂದನ್ನು ಹಮ್ಮಿಕೊಂಡಿದೆ ಎಂದು  ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಪುನತಿ ಶ್ರೀಧರ್ ಹೇಳಿದ್ದಾರೆ. ರಾಜ್ಯದಲ್ಲಿರುವ ಗ್ರೇಟ್ ಇಂಡಿಯನ್ ಬಸ್ಟರ್ಡ್ ಹಕ್ಕಿಗಳ ಸಂಖ್ಯೆಯೂ ಕ್ಷೀಣಿಸುತ್ತಿದೆ ಎಂದು ನಗರದಲ್ಲಿ ಇತ್ತೀಚೆಗೆ ಆಯೋಜಿಸಲ್ಪಟ್ಟ ಮೂರು ದಿನಗಳ ಹಕ್ಕಿ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಾ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಪ್ರಸಕ್ತ ಸುಮಾರು 200 ಇಂತಹ ಹಕ್ಕಿಗಳಿವೆ ಎಂದು ಹೇಳಿದ ಅವರು ಈ ಹಕ್ಕಿಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳದೇ ಹೋದಲ್ಲಿ ಮುಂದೆ ಅವುಗಳ ಸಂತತಿಯೇ ನಾಶವಾಗಬಹುದು ಎಂದಿದ್ದಾರೆ. ಈ ಹಕ್ಕಿಗಳ ಸಂರಕ್ಷಣೆಗಾಗಿ ಜನತೆ ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದೂ ಅವರು ತಿಳಿಸಿದ್ದಾರೆ. ಪಶ್ಚಿಮ ಘಟ್ಟದಲ್ಲಿರುವ ಸಸ್ಯ ಹಾಗೂ ವನ್ಯಜೀವಿ ಸಂಪತ್ತನ್ನು ರಕ್ಷಿಸುವ ಅಗತ್ಯವನ್ನೂ ಅವರು ಒತ್ತಿ ಹೇಳಿದ್ದಾರೆ.

 

LEAVE A REPLY