‘ಅರಣ್ಯವಾಸಿಗಳನ್ನು ವಂಚಿಸಲಾಗುತ್ತಿದೆ’

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಬೆಳ್ತಂಗಡಿ : “ಕುದುರೇಮುಖ ರಾಷ್ಟ್ರೀಯ ಉದ್ಯಾನದೊಳಗೆ ವಾಸಿಸುತ್ತಿರುವ ಮೂಲನಿವಾಸಿಗಳು ತಮ್ಮ ಜಮೀನಿನ ಹಕ್ಕುಪತ್ರಕ್ಕಾಗಿ ಅರಣ್ಯ ಹಕ್ಕು ಕಾಯ್ದೆಯಲ್ಲಿ ಅರ್ಜಿ ಸಲ್ಲಿಸಿ ಹಕ್ಕುಪತ್ರಕ್ಕಾಗಿ ಕಾಯುತ್ತಿದ್ದಾರೆ. ಆದರೆ ಇದೀಗ ಅವರ ಅರ್ಜಿಗಳನ್ನು ತಿರಸ್ಕರಿಸುತ್ತಾ ಅರಣ್ಯವಾಸಿಗಳನ್ನು ವಂಚಿಸಲಾಗುತ್ತಿದೆ. ಈ ಬಗ್ಗೆ ಕೂಡಲೇ ಅಧಿಕಾರಿಗಳು ಗಮನಹರಿಸಬೇಕು” ಎಂದು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಮುಖಂಡ ವಿಠಲ ಮಲೆಕುಡಿಯ ಅವರು ಮಲೆಕುಡಿಯರ ಕುಂದುಕೊರತೆ ಸಭೆಯಲ್ಲಿ ಅಧಿಕಾರಿಗಳನ್ನು ಒತ್ತಾಯಿಸಿದರು.

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಶುಕ್ರವಾರ ಬೆಳ್ತಂಗಡಿ ತಹಶೀಲ್ದಾರ್ ತಿಪ್ಪೇಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಮಲೆಕುಡಿಯ ಸಮುದಾಯದ ಕುಂದು ಕೊರತೆ ಸಭೆಯಲ್ಲಿ ತಮ್ಮ ಮೂಲಭೂತ ಬೇಡಿಕೆಗಳನ್ನು ಮುಂದಿಟ್ಟರು.

ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಕುತ್ಲೂರು ಗ್ರಾಮದಿಂದ ಸಲ್ಲಿಕೆಯಾಗಿದ್ದ ಎಲ್ಲ 24 ಅರ್ಜಿಗಳೂ ತಿರಸ್ಕøತವಾಗಿದ್ದು, ಇದಕ್ಕೇನು ಕಾರಣವೆಂಬ ಪ್ರಶ್ನೆಗೆ ಉತ್ತರಿಸಿದ ಸಮಾಜ ಕಲ್ಯಾಣ ಇಲಾಖಾಧಿಕಾರಿಗಳು, “ತಿರಸ್ಕøತಗೊಂಡಿರುವ ಅರ್ಜಿಗಳ ಮರು ಪರಿಶೀಲನೆಗಾಗಿ ಉಪವಿಭಾಗಾಧಿಕಾರಿ ಅಧ್ಯಕ್ಷತೆಯ ಸಮಿತಿಗೆ ಕಳುಹಿಸಲಾಗಿದೆ. ಎಲ್ಲರಿಗೂ ಹಕ್ಕು ಪತ್ರ ದೊರಕಿಸಲು ಕ್ರಮಕೈಗೊಳ್ಳಲಾಗುವುದು” ಎಂದು ಭರವಸೆಯಿತ್ತರು.