ಅಸ್ನೋಟಿಕರ್ ಇಂದು ಜೆಡಿಎಸ್ ಸೇರ್ಪಡೆ

ಬೆಂಗಳೂರು : ಕೆಲವು ವರ್ಷ ರಾಜಕೀಯದಿಂದ ದೂರವಿದ್ದ ಮಾಜಿ ಸಚಿವ ಆನಂದ ಅಸ್ನೋಟಿಕರ್, ಇಂದು ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲಿ ನಡೆಯಲಿರುವ ಸಮಾರಂಭವೊಂದರಲ್ಲಿ ಜೆಡಿಎಸ್ ಸೇರಿಕೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹಾಗೂ ಇತರ ಕೆಲವು ಮುಖಂಡರು ಉಪಸ್ಥಿತರಿರುವರು.