ಪೆರ್ಡೂರು ದೇವಳ ಬಳಿ ಕಸದ ರಾಶಿ

ನಮ್ಮ ಪ್ರತಿನಿಧಿ ವರದಿ

ಉಡುಪಿ : ಸ್ವಚ್ಛತೆ ಕಾಪಾಡಲು ಪೆರ್ಡೂರು ಗ್ರಾಮ ಪಂಚಾಯತ್ ಸಂಪೂರ್ಣ ವಿಫಲವಾಗಿದೆ ಎಂಬ ದೂರು ಗ್ರಾಮಸ್ಥರಿಂದ ಕೇಳಿಬರುತ್ತಿದೆ.

ಪೆರ್ಡೂರಿನ ಅನಂತಪದ್ಮನಾಭ ದೇವಸ್ಥಾನ ಬಳಿ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು, ಜೆಪಿಟಿ ಶಾಲಾ ಮುಂಬಾಗದಲ್ಲಿಯೂ ಎಲ್ಲೆಂದರಲ್ಲಿಯೂ ಕಸದ ರಾಶಿ ತುಂಬಿ ತುಳುಕುತ್ತಿದ್ದರೂ, ಗ್ರಾಮ ಪಂಚಾಯತ್ ಕಸ-ತ್ಯಾಜ್ಯಗಳನ್ನು ವಿಲೇವಾರಿ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆನ ಎಂದು ಸ್ಥಳೀಯರು ಹೇಳಿದ್ದಾರೆ.

ಗ್ರಾಮ ಪಂಚಾಯತ್ ಆಡಳಿತ ಕೂಡಲೇ ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ತಪ್ಪಿದಲ್ಲಿ ಪಂಚಾಯತಿನ ಕಾರ್ಯವೈಖರಿ ವಿರುದ್ಧ ಪಂಚಾಯತ್  ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.