ಅರಬೈಲ್ ಘಟ್ಟದಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಪಲ್ಟಿಯಾದ ಟ್ಯಾಂಕರ್

ನಮ್ಮ ಪ್ರತಿನಿಧಿ ವರದಿ

ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಸೋಮವಾರ ರಾತ್ರಿ ಗ್ಯಾಸ್ ತುಂಬಿದ ಟ್ಯಾಂಕರ್ ಪಲ್ಟಿಯಾಗಿದೆ.

ಅಂಕೋಲಾ ಕಡೆಯಿಂದ ಧಾರವಾಡ ಕಡೆಗೆ ಗ್ಯಾಸ್ ತುಂಬಿಕೊಂಡು ಹೊರಟಿದ್ದ ಟ್ಯಾಂಕರ್ ಅರಬೈಲ್ ಘಟ್ಟದ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಾಲುವೆಯಲ್ಲಿ ಪಲ್ಟಿಯಾಗಿದೆ. ಚಾಲಕ-ನಿರ್ವಾಹಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅದೃಷ್ಟವಶಾತ್ ಟ್ಯಾಂಕರಿನಿಂದ ಗ್ಯಾಸ್ ಸೋರಿಕೆಯಾಗಿಲ್ಲ.