ಬಂಟ್ವಾಳ ಕೇಸು ಡೈರಿ ಹಾಜರುಪಡಿಸಿ : ಹೈ

ಶರತ್ ಶವಯಾತ್ರೆ ವೇಳೆ ಗಲಭೆ

ನಮ್ಮ ಪ್ರತಿನಿಧಿ ವರದಿ

ಬೆಂಗಳೂರು : ದುಷ್ಕರ್ಮಿಗಳಿಂದ ಹತ್ಯೆಗೀಡಾದ ಶರತ್ ಮಡಿವಾಳ ಶವ ಯಾತ್ರೆ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆ ಹಾಗೂ ಇದರಿಂದ ಸಾರ್ವಜನಿಕ ಆಸ್ತಿಪಾಸ್ತಿಗೆ ಉಂಟಾದ ನಷ್ಟಕ್ಕೆ ಸಂಬಂಧಿಸಿದಂತೆ ಪರಿವಾರ ಸಂಘಟನೆಗಳ ಮುಖಂಡರ ವಿರುದ್ಧ ದಾಖಲಿಸಿರುವ ಪ್ರಕರಣದ ಕುರಿತು `ಕೇಸು ಡೈರಿ’ ಹಾಜರು ಪಡಿಸಿ ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಹೇಳಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫೈಆರ್ ರದ್ದುಪಡಿಸಬೇಕೆಂದು ಪರಿವಾರ ಸಂಘಟನೆ ಮುಖಂಡರಾದ ಮುರಳೀಕೃಷ್ಣ ಹಸಂತಡ್ಕ, ಸತ್ಯಜಿತ್ ಸುರತ್ಕಲ್, ಹರೀಶ್ ಪೂಂಜಾ, ಶರಣ್ ಪಂಪೆಲ್, ಪ್ರದೀಪಕುಮಾರ್ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್, ಪ್ರಕರಣದ ಕುರಿತ ಕೇಸು ಡೈರಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದ್ದಾರೆ.