ಗಣಿ ಹಗರಣ : ಕುಮಾರಸ್ವಾಮಿ ಮನವಿಗೆ ಹೈಕೋರ್ಟ್ ತಿರಸ್ಕಾರ

ಬೆಂಗಳೂರು : ತಮ್ಮ  ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ ತನಿಖಾಧಿಕಾರಿಯ ಎದುರು ಪ್ರತಿ 15 ದಿನಗಳಿಗೊಮ್ಮೆ ಹಾಜರಾಗುವುದರಿಂದ ತಮಗೆ ವಿನಾಯಿತಿ ನೀಡಬೇಕೆಂದು ಕೋರಿ ಜೆಡಿ(ಎಸ್) ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಸಲ್ಲಿಸಿರುವ ಮನವಿಯನ್ನು ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ಪ್ರಕರಣದ ಅಂತಿಮ ವರದಿ ಸಲ್ಲಿಕೆಯಾಗುವ ತನಕ ಅಥವಾ ಮುಂದಿನ ಆರು ತಿಂಗಳುಗಳ ಕಾಲ ಪ್ರತಿ 15 ದಿನಗಳಿಗೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಕಲಬುರ್ಗಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಕರಣದ ವಿಚಾರಣೆ ನಡೆಸಿದ ಜಸ್ಟಿಸ್ ರತ್ನಕಲಾ ಅವರು ಕುಮಾರಸ್ವಾಮಿಗೆ ಆದೇಶಿಸಿದ್ದಾರೆ.