ರೈ ವಿರುದ್ಧ ದೂರು ಅರ್ಜಿ ವಿಚಾರಣೆ ಮುಂದೂಡಿಕೆ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಅವರನ್ನು ನಿಂದಿಸಿ ಮಾತನಾಡಿದ್ದಾರೆ ಎನ್ನುವ ಆರೋಪದ ಮೇಲೆ ಸಚಿವ ರಮಾನಾಥ ರೈ ವಿರುದ್ಧದ ದೂರಿನ ವಿಚಾರಣೆ ನಡೆಸಿದ ಮಂಗಳೂರು ಎರಡನೇ ಜೆಎಂಎಫ್‍ಸಿ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 16ಕ್ಕೆ ಮುಂದೂಡಿದೆ.

ಬಿಜೆಪಿ ಮುಖಂಡ ರಹೀಂ ಉಚ್ಚಿಲ್ ಅವರು ರೈ ವಿರುದ್ಧ ದೂರು ನೀಡಿದ್ದರು. ನ್ಯಾಯಾಲಯವು ರಹೀಂ ಅವರಿಂದ ಈಗಾಗಲೇ ಹೇಳಿಕೆ ಪಡೆದುಕೊಂಡಿದೆ.