ಮಂಗಳೂರಲ್ಲೂ ಆಕ್ರೋಶ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಕಲ್ಲಡ್ಕ ಪ್ರಭಾಕರ ಭಟ್ಟರನ್ನು ಬಂಧಿಸುವಂತೆ ಜಿಲ್ಲಾ ಎಸ್ಪಿಗೆ ನಿರ್ದೇಶನ ನೀಡಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಪಿವಿಎಸ್ ವೃತ್ತದ ಬಳಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.