ಡೀಕೇಶಿ ವಿರುದ್ಧ ಇಡಿ, ಸಿಬಿಐ ತನಿಖೆ ನಡೆಸಲು ಪೀಎಂಗೆ ಹಿರೇಮಠ್ ಪತ್ರ

ಬೆಂಗಳೂರು : ಹೇರಳ ಅಕ್ರಮ ಆಸ್ತಿ ಸಂಪಾದಿಸಿರುವ ಇಂಧನ ಖಾತೆ ಸಚಿವ ಡೀಕೆ ಶಿವಕುಮಾರ್ ಪ್ರಕರಣವನ್ನು ಜಾರಿ ನಿರ್ದೇಶನಾಲಯ, ಸಿಬಿಐ ಹಾಗೂ ಕಪ್ಪು ಹಣದ ಶೋಧಕ್ಕಾಗಿ ನೇಮಕಗೊಂಡಿರುವ ವಿಶೇಷ ತನಿಖಾ ತಂಡ(ಎಸೈಟಿ)ದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿರುವ ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್ ಆರ್ ಹಿರೇಮಠ್, ತಾನು ಪ್ರಧಾನಿ ನರೇಂದ್ರ ಮೋದಿಗೆ ಈ ಕುರಿತು ಪತ್ರ ಬರೆದಿರುವುದಾಗಿ ಹೇಳಿದ್ದಾರೆ.

ಮಾಧ್ಯಮ ಮಂದಿಯೊಂದಿಗೆ ಮಾತನಾಡಿದ ಅವರು, “ಭ್ರಷ್ಟಾಚಾರ, ಅಕ್ರಮ ಗಣಿಗಾರಿಕೆ ಮೂಲಕ ಶಿವಕುಮಾರ್ ಸಹಿತ ರಾಜ್ಯದ ಹಲವು ಮಂದಿ ಸಚಿವರು ರಾಜ್ಯವನ್ನು ಲೂಟಿ ಹೊಡೆದಿದ್ದಾರೆ. ಈ ನಿಟ್ಟಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿ ಸ್ವಾಗತಾರ್ಹವಾಗಿದೆ. ಎಲ್ಲಾ ತನಿಖೆಗಳೂ ನಿಷ್ಪಕ್ಷಪಾತವಾಗಿ ನಡೆಯಲು ಪೂರಕವಾಗುವಂತೆ ಕೂಡಲೇ ಶಿವಕುಮಾರ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.