ಬೈದೆತಿ ಪುತ್ಥಳಿ ಅಪವಿತ್ರಗೊಳಿಸಿದ ಆರೋಪಿ ವಿರುದ್ಧ ಕಠಿಣ ಶಿಕ್ಷೆಗೆ ಹಿಂಜಾವೇ ಒತ್ತಾಯ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಬಂಟ್ವಾಳ : ಪುತ್ತೂರಿನಲ್ಲಿ ದೇಯಿ ಬೈದೆತಿಯ ಪುತ್ಥಳಿಯನ್ನು ಅಪವಿತ್ರಗೊಳಿಸಿದ ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಶನಿವಾರ ಸಂಜೆ ಬಿ ಸಿ ರೋಡಿನ ಬಸ್ ನಿಲ್ದಾಣ ಬಳಿ ದೊಂದಿ ಹಿಡಿದು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭ ಮಾತನಾಡಿದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ, “ನಮ್ಮ ಆರಾಧ್ಯ ದೈವ ಮಾತೆ ದೇಯಿ ಬೈದೆತಿಯ ಪುತ್ಥಳಿಯನ್ನು ಅಪವಿತ್ರಗೊಳಿಸಿ ಧಾರ್ಮಿಕ ಭಾವನೆಗೆ ದಕ್ಕೆ ತಂದಿರುವ ಮತಾಂಧ ಶಕ್ತಿಗಳಿಗೆ ಸರಿಯಾದ ಶಿಕ್ಷೆ ಆಗುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ. ನಮ್ಮ ಧಾರ್ಮಿಕ ಆಚಾರ ವಿಚಾರಗಳಿಗೆ ಮತ್ತು ನಂಬಿಕೆಗಳಿಗೆ ಅಪಚಾರ ವೆಸಗಿದ ನೀಚರಿಗೆ ರಾಜ್ಯ ಸರಕಾರ ಸರಿಯಾದ ಶಿಕ್ಷೆ ನೀಡುವ ಮೂಲಕ ನ್ಯಾಯ ಒದಗಿಸಬೇಕು ಮತ್ತು ದ ಕ ಜಿಲ್ಲೆಯಲ್ಲಿ ಶಾಂತಿ ನೆಲಸಲು ಅವಕಾಶ ಮಾಡಬೇಕು” ಎಂದು ಆಗ್ರಹಿಸಿದರು.