ಮನೆಗೆ ನುಗ್ಗಿ ಲಕ್ಷಾಂತರ ರೂ ಸೊತ್ತು ಕಳವು

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಮನೆ ಮುಂಭಾಗದ ಬಾಗಿಲನ್ನು ಒಡೆದು ಒಳ ನುಗ್ಗಿದ ಕಳ್ಳರು ಚಿನ್ನಾಭರಣ ಸಹಿತ ನಗದು ದೋಚಿ ಪರಾರಿಯಾಗಿದ್ದಾರೆ. ಘಟನೆ ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ರೆಡ್ ನೇತ್ರಾವತಿ ಲೇಔಟ್ ಬಡಾವಣೆಯಲ್ಲಿರುವ ಮನೆಯಲ್ಲಿ ನಡೆದಿದೆ.

ಮನೆ ಮಾಲಕ ಪ್ರಕಾಶ್ ಮತ್ತು ಅವರ ಪತ್ನಿ ಕಾರ್ಯ ನಿಮಿತ್ತ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿದ ಕಳ್ಳರು ಬೆಡ್ ರೂಂ ಪ್ರವೇಶಿಸಿ ಕಪಾಟಿನಲ್ಲಿ ಇಟ್ಟಿದ್ದ ಪ್ರಕಾಶ್ ಅವರ ಪತ್ನಿಯ ಬಂಗಾರದ ಕರಿಮಣಿ ಸರ, ಮಾಂಗಲ್ಯ ಸರ, ಕಿವಿ ಓಲೆ, ಕೈ ಬೆರಳ ಉಂಗುರ ಕಳವು ಮಾಡಿದ್ದಾರೆ. ಅಲ್ಲದೆ ನಗದು ಹಣ ಕೂಡಾ ಕಳವು ಮಾಡಿದ್ದಾರೆನ್ನಲಾಗಿದೆ. ಒಟ್ಟು 2,82,000 ರೂ ಮೌಲ್ಯದ ಚಿನ್ನಾಭರಣ ಕಳವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.