ಪಡುತೋನ್ಸೆಯ ಅಕ್ರಮ ಮರಳು ಅಡ್ಡೆಗೆ ದಾಳಿ

ನಮ್ಮ ಪ್ರತಿನಿಧಿ ವರದಿ

ಉಡುಪಿ : ಅಕ್ರಮ ಮರಳುಗಾರಿಕೆ ಬಗ್ಗೆ ಸುಳಿವು ಪಡೆದ ಅಧಿಕಾರಿಗಳು ಪಡುತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ನಡೆಸಿ ಮೂರು ಯೂನಿಟ್ಟಿಗೂ ಅಧಿಕ ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜಿಲ್ಲಾಧಿಕಾರಿ ಆದೇಶವನ್ನೂ ಧಿಕ್ಕರಿಸಿ ಇಲ್ಲಿ ನಿರಾತಂಕವಾಗಿ ಮರಳುಗಾರಿಕೆ ನಡೆಯುತ್ತಿತ್ತು. ಈ ಬಗ್ಗೆ ಗುರುವ ಸುವರ್ಣ ಎಂಬವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಡು ತೋನ್ಸೆ ಪಂಚಾಯತ್ ವಿ ಎ ರೇಶ್ಮಾ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಅಲ್ಲದೆ ಗ್ರಾಮ ಪಂಚಾಯತ್ ಹಾಗೂ ಟಾಸ್ಕ್ ಫೆÇೀರ್ಸ್ ಜಂಟಿ ದಾಳಿ ನಡೆಯಿತು.

ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಯುತ್ತಿದೆ ಎನ್ನುವ ಮುನ್ಸೂಚನೆ ಸಿಕ್ಕಿದ ಕೂಡಲೇ ಅಲ್ಲಿಂದ ಆರೋಪಿಗಳು ಪರಾರಿಯಾಗಿದ್ದಾರೆ. ಮರಳು ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.