ಅಕ್ರಮ ಮರಳು ಸಾಗಾಟ : ಲಾರಿ, ಚಾಲಕ ವಶ

ಸಾಂದರ್ಭಿಕ ಚಿತ್ರ

 ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಯಾವುದೇ ದಾಖಲೆಗಳು ಇಲ್ಲದೇ ಸಾಗಾಟ ಮಾಡುತ್ತಿದ್ದ ಅಕ್ರಮ ಮರಳನ್ನು ಪತ್ತೆ ಹಚ್ಚಿದ ಉಳ್ಳಾಲ ಠಾಣಾ ಪೊಲೀಸರು ಟಿಪ್ಪರ್ ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನ 28ರಂದು ಉಳ್ಳಾಲ ಪೊಲೀಸ್ ಠಾಣಾ  ನಿರೀಕ್ಷಕರು  ಆಡಂ ಕುದ್ರುವಿನಿಂದ ತೊಕ್ಕೊಟ್ಟು ಕಡೆಗೆ ಸಾಗುತ್ತಿದ್ದ ಟಿಪ್ಪರ್  ಲಾರಿಯನ್ನು ನಿಲ್ಲಿಸಿ ತಪಾಸಣೆಗೈದಾಗ  ಅಕ್ರಮ ಮರಳು ಸಾಗಾಟ ಪತ್ತೆಯಾಗಿದೆ. ಚಾಲಕ ಮೊಹಮ್ಮದ್  ಫಯಾಜ್ ಎಂಬಾತನನ್ನು ಬಂಧಿಸಿ ಲಾರಿಯನ್ನು ವಶಪಡಿಸಿಕೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.