ಮರ ಸಾಗಾಟ ಪತ್ತೆ : ಆರೋಪಿಗಳು ಪರಾರಿ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ದಟ್ಟಾರಣ್ಯದಿಂದ ವಿವಿಧ ಜಾತಿಯ ಮರಗಳನ್ನು ಕಡಿದು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಸಂಚಾರಿ ಅರಣ್ಯದಳದ ಸಿಬ್ಬಂದಿ 27 ಮರದ ದಿಮ್ಮಿಗಳನ್ನು ಹಾಗೂ ಲಾರಿಯೊಂದನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ.

ಸುಳ್ಯ ತಾಲೂಕು ಐರ್ವರ್ನಾಡು ಬಾಜಿ ಕೋಡಿ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಐರ್ವರ್ನಾಡುವಿನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿಯೊಂದರಲ್ಲಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಉಪ ವಲಯ ಅರಣ್ಯ ಅಧಿಕಾರಿಗಳು ಶುಕ್ರವಾರ ಪತ್ತೆಹಚ್ಚಿ ಮೊಕದ್ದಮೆ ದಾಖಲಿಸಿದ್ದಾರೆ.

ಮುರುವ, ಬನ್ಪು, ಚಿರುವೆ ಜಾತಿಯ ಒಟ್ಟು 27 ದಿಮ್ಮಿಗಳನ್ನು ಹಾಗೂ ಸಾಗಾಟ ಮಾಡಲಾದ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಸಾಗಾಟದ ಆರೋಪಿಗಳು ಪರಾರಿಯಾಗಿದ್ದಾರೆ.