ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷನ ನಿವಾಸ, ಕಚೇರಿಗಳ ಮೇಲೆ ಐಟಿ ದಾಳಿ

ಶಿವಮೊಗ್ಗ : ಕಾಂಗ್ರೆಸ್ ನಾಯಕ   ಹಾಗೂ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ ಗೌಡ ಅವರ ತೀರ್ಥಹಳ್ಳಿಯಲ್ಲಿರುವ ನಿವಾಸ ಹಾಗೂ ನಗರದ ಹೊರವಲಯದಲ್ಲಿರುವ ಕರಾಕುಚಿ ಎಂಬಲ್ಲಿರುವ ಫಾರ್ಮ್ ಹೌಸ್ ಮೇಲೆ ಬುಧವಾರ ಆದಾಯ ತೆರಿಗೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಕೇಂದ್ರ ಸಹಕಾರಿ ಬ್ಯಾಂಕಿನ ಶಿವಮೊಗ್ಗ ಕಚೇರಿ ಹಾಗೂ ಅದಕ್ಕೆ ಸಂಬಂಧಪಟ್ಟ ಇತರ ಸಹಕಾರಿ ಬ್ಯಾಂಕುಗಳಲ್ಲೂ ಐಟಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾಡಿe, ಗೌಡ ಅವರು ನಕಲಿ ಚಿನ್ನ ಅಡವಿರಿಸಿದವರಿಗೆ ಸಾಲ ನೀಡಿದ  ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರಲ್ಲದೆ ಆಗಸ್ಟ್ 2014ರಲ್ಲಿ ಬಂಧನಕ್ಕೊಳಗಾಗಿದ್ದರು. ಈ ಅಕ್ರಮ ವ್ಯವಹಾರದಿಂದ ಬ್ಯಾಂಕು ರೂ 62 ಕೋಟಿ ನಷ್ಟ ಅನುಭವಿಸಿತ್ತು ಎಂದು ತನಿಖೆಯಲ್ಲಿ ಕಂಡು ಬಂದಿತ್ತು. 2013ರ ಅಸೆಂಬ್ಲಿ ಚುನಾವಣೆಯಲ್ಲಿ ತೀರ್ಥಹಳ್ಳಿಯಿಂದ ಸ್ಪರ್ಧಿಸಿ ಸೋತಿದ್ದ ಗೌಡ ನಂತರ  ಮತ್ತೆ ಕಾಂಗ್ರೆಸ್ ಸೇರಿದ್ದರು.