ಸಾಗರದಿಂದ ಜಯಮಾಲ ಸ್ಪರ್ಧೆ ?

ಬೆಂಗಳೂರು : ವಿಧಾನಪರಿಷತ್ ಸದಸ್ಯರಾಗಿರುವ ಹಿರಿಯ ನಟಿ ಜಯಮಾಲಾ ವಿಧಾನಸಭೆ ಪ್ರವೇಶಿಸಲು ಶಿವಮೊಗ್ಗ ಜಿಲ್ಲೆಯ ಸಾಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದು, ತಮಗೆ ಟಿಕೆಟ್ ನೀಡುವಂತೆ ವರಿಷ್ಟರ ಮೇಲೆ ಒತ್ತಡ ಹೇರಿದ್ದಾರೆ.

ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಪ್ರತಿನಿಧಿಸುತ್ತಿರುವ ಸಾಗರ ವಿಧಾನಸಭಾ ಕ್ಷೇತ್ರದ ಮೇಲೆ ನಟಿ ಜಯಮಾಲಾ ಕಣ್ಣಟ್ಟಿರುವುದು ತೀವ್ರ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಈ ವಿಧಾನಸಭಾ ಕ್ಷೇತ್ರದಲ್ಲಿ ಈಡಿಗರು ಮತ್ತು ಹವ್ಯಕ ಸಮುದಾಯಕ್ಕೆ ಸೇರಿದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಟಿ ಜಯಮಾಲಾ ಈಡಿಗ ಜನಾಂಗಕ್ಕೆ ಸೇರಿದ್ದಾರೆ. ಜಯಮಾಲಾ ಅವರ ಪತಿ ಹವ್ಯಕ ಸಮಾಜದ ರಾಮಚಂದ್ರ ಮೂಲತಃ ಸಾಗರದವಾಗಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 86 ವರ್ಷ ವಯಸ್ಸಿನ ಹಿರಿಯ ಕಾಂಗ್ರೆಸ್ ಧುರೀಣ ಕಾಗೋಡು ತಿಮ್ಮಪ್ಪ

ಸ್ಪರ್ಧಿಸುವ ಸಾಧ್ಯತೆ ತೀರಾ ಮಡಿಮೆ ಎಂದು ಹೇಳಲಾಗುತ್ತಿದೆ. ಹಾಗಿದ್ದಾಗ್ಯೂ ಕಾಗೋಡು ತಮ್ಮ ಪುತ್ರಿಗೆ ಸಾಗರ ವಿಧಾನಸಭಾ ಕ್ಷೇತರ್ರದಿಂದ ಟಿಕೆಟ್ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ವಿಧಾನಪರಿಷತ್ ಸದಸ್ಯರಿಗೆ ದೊರೆಯುವ ಅನುದಾನವನ್ನು ಅಭಿವೃದ್ಧಿ ಕಾರ್ಯಗಳಿಗೆ ಜಯಮಾಲ ವೆಚ್ಚ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಕಾಂಗ್ರೆಸ್ ನಾಯಕರು ಬೆಂಗಳೂರಿನ ರಾಜಾಜಿನಗರ ಕ್ಷೇತ್ರದಿಂದ ಸ್ರ್ಪರ್ಧಿಸುವಂತೆ ಜಯಮಾಲಾ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

LEAVE A REPLY