ದೀಪಕ್ ಕೊಲೆಯ ಇಬ್ಬರು ನ್ಯಾಯಾಂಗ ಬಂಧನಕ್ಕೆ

ಸಾಂದರ್ಭಿಕ ಚಿತ್ರ

ಮಂಗಳೂರು : ದೀಪಕ್ ಕೊಲೆ ಕೃತ್ಯದ ಇಬ್ಬರು ಆರೋಪಿಗಳಾದ ನೌಷಾದ್ ಮತ್ತು ಮೊಹಮ್ಮದ್ ಇರ್ಷಾನಗೆ ಜನವರಿ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಜನವರಿ 4ರಂದು ಈ ಇಬ್ಬರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು.  ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಪೊಲೀಸ್ ಕಾರ್ಯಾಚರಣೆ ವೇಳೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇನ್ನಿಬ್ಬರು ಆರೋಪಿಗಳಾದ ಪಿಂಕಿ ನವಾಝ್ ಮತ್ತು ರಿಜ್ವಾನ್ ತನಿಖೆ ಇನ್ನಷ್ಟೇ ಶುರುವಾಗಬೇಕಾಗಿದೆ. ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಕೋರ್ಟಿಗೆ ಹಾಜರುಪಡಿಸಿ ಬಳಿಕ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆ ಇದೆ.

LEAVE A REPLY