ರಾಘವೇಶ್ವರ ಶ್ರೀ ವಿಚಾರಣೆಯಿಂದ ಹಿಂದಕ್ಕೆ ಸರಿದ ನ್ಯಾ ಫಣೀಂದ್ರ

ನಮ್ಮ ಪ್ರತಿನಿಧಿ ವರದಿ

ಬೆಂಗಳೂರು : ಹೊಸನಗರದ ರಾಘವೇಶ್ವರ ಶ್ರೀ ವಿರುದ್ಧದ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಹೈಕೋರ್ಟ್ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಹಿಂದೆ ಸರಿದಿದ್ದಾರೆ.

ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ್ ಮೇಲೆ ಅತ್ಯಾಚಾರ ನಡೆಸಿದ ಆರೋಪವನ್ನು ರಾಘವೇಶ್ವರ ಸ್ವಾಮೀಜಿಗಳು ಎದುರಿಸುತ್ತಿದ್ದಾರೆ. ಶ್ರೀಗಳನ್ನು ಆರೋಪ ಮುಕ್ತಗೊಳಿಸಿದ್ದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನ್ಯಾಯಮೂರ್ತಿ ಫಣೀಂದ್ರ ಅವರ ಎದುರಿಗಿತ್ತು.

ಬೆಂಗಳೂರು ನಗರ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ್ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ಶುಕ್ರವಾರ ವಿಚಾರಣೆಗೆ ಬರುತ್ತಿದ್ದಂತೆ ನ್ಯಾಯಮೂರ್ತಿ ಫಣೀಂದ್ರ ವಿಚಾರಣೆಯಿಂದ ಹಿಂದಕ್ಕೆ ಸರಿದಿದ್ದಾರೆ.

ಶ್ರೀಗಳ ವಿರುದ್ಧ ಅತ್ಯಾಚಾರ ಆರೋಪ ಸಾಬೀತು ಪಡಿಸಲು ಯಾವುದೇ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲ. ಈ ಕುರಿತಂತೆ ತನಿಖೆ ನಡೆಸಿದ ಸಿಐಡಿ ಪೊಲೀಸರು ಈಗಾಗಲೇ ಸಲ್ಲಿಸಿರುವ ಆರೋಪ ಪಟ್ಟಿಯಲ್ಲೂ ಆರೋಪ ಸಾಬೀತು ಮಾಡುವಂತಹ ಯಾವುದೇ ಸಾಕ್ಷ್ಯಗಳಿಲ್ಲ ಎನ್ನುವ ಮೂಲಕ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಿ ಬಿ ಮುದಿಗೌಡರ್ ಶ್ರೀಗಳನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿ ತೀರ್ಪು ಪ್ರಕಟಿಸಿದ್ದರು.

 

 

LEAVE A REPLY