ಕದ್ರಿ, ಕುದ್ರೋಳಿ ದೇಗುಲಕ್ಕೆ ನಟ ಶಿವರಾಜಕಮಾರ್

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಕನ್ನಡದ ನಟ ಶಿವರಾಜಕುಮಾರ್ ಗುರುವಾರದಂದು ನಗರದ ಕದ್ರಿ ದೇವಾಲಯ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಬುಧವಾರ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಪೇಜಾವರ ವಿಶ್ವೇಶತೀರ್ಥ ಸ್ವಾಮಿಯವರಿಂದ ಆಶೀರ್ವಾದ ಪಡೆದುಕೊಂಡಿದ್ದರು.

ಅಭಿಮಾನಿಗಳು ನಟನ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಕಳೆದ ಮೂರು ತಿಂಗಳುಗಳಿಂದ `ಟಗರು’ ಚಿತ್ರದ ಚಿತ್ರೀಕರಣ ಉಡುಪಿ ಆಸುಪಾಸಿನಲ್ಲಿ ನಡೆಯುತ್ತಿದೆ. ಶಿವರಾಜಕುಮಾರ್ ಹಾಗೂ ನಟಿ ಮಾನ್ವಿತಾ ಕೂಡ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಗುರುವಾರ ಸಂಜೆ ಮಂಗಳೂರಿನ ಕದ್ರಿಯಲ್ಲಿ ನಡೆಯುವ ಮೊಸರು ಕುಡಿಕೆ ಸಂಭ್ರಮದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ ಅವರು ಪಾಲ್ಗೊಂಡರು.